ಲಕ್ಕೋ : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು. 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಡಲಿಯಿಂದ ಕೊಂದ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಘಟಿಸಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟ ಕೊಟ್ಟು ಮನೆಗೆ ಮರಳುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಡಲಿಯಿಂದ ಕಡಿದು ಕೊಂದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ಈ ಮಾಹಿತಿ ನೀಡಿದ್ದಾರೆ .
ಈ ಕುರಿತು ಪ್ರತಿಕ್ರಿಯಿಸಿರುವ ಸರ್ಕಲ್ ಇನ್ಸ್ ಪೆಕ್ಟರ್ ಸುಬೋಧೆ ಗೌತಮ್, ಹೊಲದಿಂದ ಹಿಂತಿರುಗುತ್ತಿದ್ದ ವೇಳೆ ಬಾಲಕಿಯ ಮೇಲೆ ದೌರ್ಜನ್ಯ ಎಸಗಲಾಗಿದೆ ಮತ್ತು ಹತ್ಯೆ ಮಾಡಲಾಗಿದೆ. ಆಕೆಯೊಂದಿಗೆ ಇದ್ದ ನಾಲ್ಕು ವರ್ಷದ ಸಹೋದರನ ಮೇಲೆಯೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿಸಿದರು.
ಈ ಕುರಿತ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದರು.