News Karnataka Kannada
Tuesday, April 16 2024
Cricket
ವಿದೇಶ

18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ; ಇಂದಿನಿಂದ ನೋಂದಣಿ ಆರಂಭ

Photo Credit :

18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ; ಇಂದಿನಿಂದ ನೋಂದಣಿ ಆರಂಭ

ನವದೆಹಲಿ, : ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ನಿಯಂತ್ರಣಕ್ಕಾಗಿ ಮೇ 1ರಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಮೂರನೇ ಹಂತಕ್ಕೆ ಚಾಲನೆ ನೀಡಲಾಗುತ್ತಿದೆ. ಮೂರನೇ ಹಂತದಲ್ಲಿ ಲಸಿಕೆ ಪಡೆಯಲು ಇಂದಿನಿಂದ ಹೆಸರು ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಆರಂಭ ಆಗಲಿದೆ.ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡಲಾಗಿತ್ತು. ಏಪ್ರಿಲ್ 1ರಿಂದ ಎರಡನೇ ಹಂತದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಈಗ ಮೂರನೇ ಹಂತದಲ್ಲಿ ಮೇ 1ರಿಂದ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 25ರವರೆಗೆ ಈಗಾಗಲೇ ದೇಶಾದ್ಯಂತ ಒಟ್ಟು 14,52,71,186 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ.
18 ವರ್ಷ ಮೇಲ್ಪಟ್ಟವರೆಲ್ಲರು ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೆಸರು ನೊಂದಾಯಿಸಿಕೊಳ್ಳುವ ಮೂಲಕ ಲಸಿಕೆ ಪಡೆಯುವ ದಿನಾಂಕ ಮತ್ತು ಸ್ಥಳ ನಿಗಧಿ ಮಾಡಿಕೊಳ್ಳಬಹುದು. ಕೋವಿನ್‌ ವೆಬ್‌ಸೈಟ್ ಮತ್ತು ಆರೋಗ್ಯ ಸೇತು ಆ್ಯಪ್ ಮೂಲಕ ಇಂದು ಸಂಜೆ ನಾಲ್ಕು ಗಂಟೆಯಿಂದ ಹೆಸರು ನೊಂದಣಿ ಮಾಡಿಕೊಳ್ಳಬೇಕಾಗಿದೆ‌. ಮೂರನೇ ಹಂತದಲ್ಲಿ ಖಾಸಗಿ ವ್ಯಾಕ್ಸಿನೇಷನ್ ಕೇಂದ್ರದಲ್ಲೂ ಲಸಿಕೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ ಖಾಸಗಿ ಕೇಂದ್ರದಲ್ಲಿ ಲಸಿಕೆ ಪಡೆಯುವುದಕ್ಕೂ ಹೆಸರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು