News Karnataka Kannada
Wednesday, April 17 2024
Cricket
ವಿದೇಶ

2 ದಿನದಲ್ಲಿ 5000ಕ್ಕೂ ಹೆಚ್ಚು ವಾಹನ ಜಪ್ತಿ

Photo Credit :

2 ದಿನದಲ್ಲಿ 5000ಕ್ಕೂ ಹೆಚ್ಚು ವಾಹನ ಜಪ್ತಿ

ಬೆಂಗಳೂರು: ಕೊರೋನಾ ಕರ್ಫ್ಯೂ ಕೊನೆಯ ದಿನಗಳಾದ ಶನಿವಾರ ಮತ್ತು ಭಾನುವಾರದಂದು ನಿಯಮ ಉಲ್ಲಂಘಿಸಿ ರಸ್ತೆಗಿಳಿದ ಜನರ ವಿರುದ್ಧ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಬೇಕಾಬಿಟ್ಟಿ ರಸ್ತೆಗಿಳಿದ ನಗರದ ಜನತೆಗೆ ಬಿಸಿ ಮುಟ್ಟಿಸಿರುವ ಪೊಲೀಸರು ಸುಮಾರು 5000ಕ್ಕೂ ಹೆಚ್ಚು ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು, ನೂರಾರು ಪ್ರಕಣ ದಾಖಲಿಸಿ ದಂಡ ವಿಧಿಸಿದ್ದಾರೆ. ಇಷ್ಟು ಮಾತ್ರವಲ್ಲದೆ, ಈಗ ವಶಪಡಿಸಿಕೊಂಡಿರುವ ಹಾಗೂ ಇನ್ನು ಮುಂದಿನ ದಿನಗಳಲ್ಲಿ ವಶಪಡಿಸಿಕೊಳ್ಳುವ ಎಲ್ಲಾ ರೀತಿಯ ವಾಹನಗಳನ್ನು ಮೇ.24ರವರೆಗೆ ಮಾಲೀಕರಿಗೆ ಮರಳಿ ನೀಡಲಾಗುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಶನಿವಾರ ಒಂದೇ ದಿನ 2723 ದ್ವಿಚಕ್ರ ವಾಹನಗಳು, 171 ತ್ರಿಚಕ್ರ ವಾಹನಗಳು, 106 ನಾಲ್ಕು ಚಕ್ರದ ವಾಹನ ಸೇರಿದಂತೆ ಒಟ್ಟು 3000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಭಾನುವಾರ ಕೂಡ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 1984 ದ್ವಿಚಕ್ರ ವಾಹನಗಳು, 99 ತ್ರಿಚಕ್ರ ವಾಹನಗಳು, 144 ನಾಲ್ಕು ಚಕ್ರಗಳ ವಾಹನ ಸೇರಿದಂತೆ 2227 ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಂತೆ ಎರಡು ದಿನಗಳಲ್ಲಿ 5,.227 ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು