News Karnataka Kannada
Wednesday, April 24 2024
Cricket
ವಿದೇಶ

3ನೇ ಬಾರಿ ಸಿಎಂ ಆಗಿ ಮಮತಾ ಬ್ಯಾನರ್ಜಿ ಇಂದು ಪ್ರಮಾಣ ವಚನ

Photo Credit :

3ನೇ ಬಾರಿ ಸಿಎಂ ಆಗಿ ಮಮತಾ ಬ್ಯಾನರ್ಜಿ ಇಂದು ಪ್ರಮಾಣ ವಚನ

ಕೋಲ್ಕತ್ತ, ; ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಟಿಎಂಸಿ 210 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆ. ಮಮತಾ ಬ್ಯಾನರ್ಜಿ 3ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ.ಮಂಗಳವಾರ ಮಮತಾ ಬ್ಯಾನರ್ಜಿ ರಾಜ್ಯಪಾಲ ಜಗದೀಪ್ ಧನ್‌ಕರ್ ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪ್ರಮಾಣ ವಚನ ಸಮಾರಂಭದ ಕುರಿತು ಮಾತುಕತೆ ನಡೆಸಿದರು. ರಾಜಭವನದಲ್ಲಿ ಬುಧವಾರ ಬೆಳಗ್ಗೆ 10.45ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಆದರೆ ಪಕ್ಷ ಬಹುಮತ ಪಡೆದ ಕಾರಣ ಅವರು 3ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾದ ಆರು ತಿಂಗಳ ಒಳಗೆ ಅವರು ವಿಧಾನಸಭೆ ಅಥವ ಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ.ಕೋವಿಡ್ ಕಾರಣದಿಂದಾಗಿ ಪ್ರಮಾಣ ವಚನ ಸಮಾರಂಭ ಸರಳವಾಗಿ ನಡೆಯಲಿದೆ. ಕೆಲವೇ ಗಣ್ಯರಿಗೆ ಮಾತ್ರವೇ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ರಾಜಭವನದ ಹೊರಗೆ ಸಹ ಟಿಎಂಸಿ ಕಾರ್ಯಕರ್ತರು ಜಮಾವಣೆಗೊಳ್ಳದಂತೆ ಸೂಚನೆ ನೀಡಲಾಗಿದೆ.ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 294 ಸ್ಥಾನಗಳಿವೆ. ಇವುಗಳಲ್ಲಿ 292 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿದೆ. ಕೋವಿಡ್ ಕಾರಣದಿಂದಾಗಿ ಅಭ್ಯರ್ಥಿಗಳು ಮೃತಪಟ್ಟ ಕಾರಣ ಎರಡು ಕ್ಷೇತ್ರದ ಚುನಾವಣೆ ಮುಂದೂಡಲಾಗಿದೆ. ಈ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು