Categories: ವಿದೇಶ

ಮಹಿಳೆಯರಿಗೆ 33 ಶೇಕಡಾ ಮೀಸಲು ಮಸೂದೆ ಮಂಡನೆ

ನವದೆಹಲಿ: ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲು ಒದಗಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ್” ಎನ್ನುವ ಮಹಿಳಾ ಮೀಸಲು ಮಸೂದೆಯನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆ ಮಾಡಲಾಗಿದೆ. ನೂತನ ಸಂಸತ್ ಭವನದಲ್ಲಿ ಮಂಗಳವಾರ ಬೆಳಗ್ಗೆ ಹೊಸ ಮಸೂದೆಯನ್ನು ಮಂಡಿಸಲಾಗಿದ್ದು ಪ್ರಧಾನಿ ಮೋದಿ ಸೆಪ್ಟೆಂಬರ್ 19 ಐತಿಹಾಸಿಕ ದಿವಸ ಎಂದು ಬಣ್ಣಿಸಿದ್ದಾರೆ.

ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲು ಮಸೂದೆಯನ್ನು ಮೋದಿ ಸರ್ಕಾರ ಹೊಸ ಸಂಸತ್ತಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿಯೇ ಮಂಡನೆ ಮಾಡಿದೆ. ಹೊಸ ಸಂಸತ್ ಭವನದಲ್ಲಿ ಅಧಿವೇಶನ ಮತ್ತು ಇದೇ ಸಂದರ್ಭದಲ್ಲಿ ಐತಿಹಾಸಿಕ ಮಸೂದೆ ಮಂಡನೆ ಮಾಡುತ್ತಿರುವುದು ಐತಿಹಾಸಿಕ ಕ್ಷಣ. ಈ ಮೂಲಕ ನಾವು ಮಹಿಳಾ ಸಶಕ್ತಿಕರಣಕ್ಕೆ ಹೆಬ್ಬಾಗಿಲು ತೆರೆಯುತ್ತಿದ್ದೇವೆ. ವಿರೋಧ ಪಕ್ಷಗಳು ಈ ಮಸೂದೆಯನ್ನು ಬೆಂಬಲಿಸಿ ಅವಿರೋಧವಾಗಿ ಪಾಸ್ ಆಗುವಂತೆ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಹಿಳೆಯರ ಮೀಸಲು ಮಸೂದೆ ಪ್ರಜಾಪ್ರಭುತ್ವ ಬಲಪಡಿಸಲಿದೆ. ಹಲವು ದಶಕಗಳಿಂದ ಈ ಕುರಿತು ಚರ್ಚೆ ನಡೆಯುತ್ತ ಬಂದಿತ್ತು. ಈ ಕ್ಷಣದಲ್ಲಿ ನಾವು ಶಾಸನ ರಚನಕಾರರು ಮಸೂದೆ ಜಾರಿಗೆ ಕೈಜೋಡಿಸಬೇಕಾಗಿದೆ. ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚೆಚ್ಚು ಮಹಿಳೆಯರು ತೊಡಗಿಸಬೇಕಾಗಿದೆ ಎಂದು ಮೋದಿ ಹೇಳಿದ್ದಾರೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಮಂಡನೆ ಮಾಡಿದ್ದಾರೆ,

ದೇಶದಲ್ಲಿ ಒಟ್ಟು 950 ಮಿಲಿಯ ಅಧಿಕೃತ ಮತದಾರರಿದ್ದು ಈ ಪೈಕಿ ಅರ್ಧದಷ್ಟು ಮಹಿಳೆಯರಿದ್ದಾರೆ. ಆದರೆ ಸಂಸತ್ತಿನಲ್ಲಿ ಇವರ ಸಂಖ್ಯೆ ಇರುವುದು ಕೇವಲ ಹದಿನೈದು ಶೇಕಡಾ. ರಾಜ್ಯ ವಿಧಾನಸಭೆಗಳಲ್ಲಿ ಹತ್ತು ಶೇಕಡಾದಷ್ಟು ಮಹಿಳಾ ಪ್ರಾತಿನಿಧ್ಯ ಇದೆ. ಈ ಮಸೂದೆ ಜಾರಿಗೆ ಬಂದಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಈಗ ಇರುವ 82ರ ಬದಲು 181 ಆಗಲಿದೆ ಎಂದು ಸಚಿವ ಅರ್ಜುನ್ ರಾಮ್‌ ಮೇಘವಾಲ್ ಅಭಿಪ್ರಾಯ

2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಸಿಗದೆ ಬಿದ್ದು ಹೋಗಿತ್ತು. ಇಂದು ಮಸೂದೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಸಂಸದ ಅಧೀರ್ ರಂಜನ್ ಚೌದರಿ, ರಾಜೀವ ಗಾಂಧಿ, ನರಸಿಂಹ ರಾವ್ ಕಾಲದಲ್ಲಿಯೇ ಮಹಿಳಾ ಮೀಸಲು ಮಸೂದೆ ಜಾರಿಗೆ ಪ್ರಯತ್ನ ನಡೆದಿತ್ತು ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ ಮಾಡಲಾಗಿತ್ತು ಎಂದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಅಮಿತ್ ಷಾ, ಆ ಮಸೂದೆ ಆಗಿನ ಕಾಲದಲ್ಲೇ ಲ್ಯಾಪ್ಸ್ ಆಗಿತ್ತು ಎಂದು ಕುಟುಕಿದರು.

Umesha HS

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

6 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

22 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

33 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

38 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

1 hour ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago