ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಉಗ್ರಗಾಮಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್) ಗೆ ಸೇರಿದವರಾಗಿದ್ದಾರೆ.
ಸೆಪ್ಟೆಂಬರ್ 4 ರಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಉಗ್ರರು ಶರಣಾಗುತ್ತಿದ್ದಾರೆ.
ಎನ್‌ಎಲ್‌ಎಫ್‌ಟಿ ಮತ್ತು ಎಟಿಟಿಎಫ್‌ನ ಸುಮಾರು 400 ಉಗ್ರಗಾಮಿಗಳು ಜಂಪೂಯಿಜಾಲಾದಲ್ಲಿರುವ ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್‌ಆರ್) ನ 7 ನೇ ಬೆಟಾಲಿಯನ್‌ನ ಪ್ರಧಾನ ಕಛೇರಿಯಲ್ಲಿ ಸಿಎಂ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ
Ad