News Karnataka Kannada
Saturday, April 27 2024
ವಿದೇಶ

ಸೇತುವೆ ಮೇಲಿಂದ ಬಸ್‌ ಬಿದ್ದು 45 ಪ್ರಯಾಣಿಕರು ಸಾವು !

Bus
Photo Credit : NewsKarnataka

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದಲ್ಲಿ ಈಸ್ಟರ್ ಸಮ್ಮೇಳನಕ್ಕೆ ತೆರಳುತ್ತಿದ್ದ ಬಸ್ ಸೇತುವೆ ಮೇಲಿನಿಂದ ಬಿದ್ದ ಪರಿಣಾಮ ಕನಿಷ್ಠ 45 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ನೆರೆಯ ರಾಷ್ಟ್ರವಾದ ಬೋಟ್ಸ್ವಾನಾದ ರಾಜಧಾನಿ ಗ್ಯಾಬೊರೊನ್‌ನಿಂದ ಈಸ್ಟರ್ ಸಮ್ಮೇಳನಕ್ಕಾಗಿ ಚರ್ಚ್‌ಗೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳು ಎಂದು ಎಸ್‌ಎಬಿಸಿ ತಿಳಿಸಿದೆ.

ಎಂಟು ವರ್ಷದ ಬಾಲಕಿ ಮಾತ್ರ ಬದುಕುಳಿದಿದ್ದಾಳೆ ಎಂದು ಎಸ್‌ಎಬಿಸಿ ಹೇಳಿದೆ. ಆಕೆಯನ್ನು ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ. ಮೊಕೊಪಾನೆ ಮತ್ತು ಮಾರ್ಕೆನ್ ನಡುವಿನ ಮಮತ್ಲಕಲಾ ಪರ್ವತದ ಹಾದಿಯಲ್ಲಿ ಅಪಘಾತ ಸಂಭವಿಸಿದೆ. ಬಸ್ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು