News Karnataka Kannada
Sunday, April 14 2024
Cricket
ವಿದೇಶ

6ರ ಬಾಲಕಿಯ ಅಪಹರಣ​… ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ

Photo Credit :

6ರ ಬಾಲಕಿಯ ಅಪಹರಣ​... ಅತ್ಯಾಚಾರ ಎಸಗಿ ಬರ್ಬರವಾಗಿ  ಕೊಲೆ

ಹಿಂದೌನ್​ (ರಾಜಸ್ಥಾನ): ದುಷ್ಕರ್ಮಿಗಳು ಆರು ವರ್ಷದ ಬಾಲಕಿಯನ್ನು ಕಿಡ್ನ್ಯಾಪ್​ ಮಾಡಿ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕರೌಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆ ಮುಂದೆ ಆಟವಾಡುತ್ತಿದ್ದ ಮಗಳು ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾಳೆ. ಕೂಡಲೇ ಸಂಬಂಧಿಕರು ಮತ್ತು ಪೋಷಕರು ಮಗಳಿಗಾಗಿ ಹುಡುಕಾಟ ನಡೆಸಿದ್ರೂ ಯಾವ ಪ್ರಯೋಜನವಾಗಿಲ್ಲ. ಬಳಿಕ ಪಾಳು ಬಿದ್ದ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಈ ಮಾಹಿತಿಯನ್ನು ಸಂಬಂಧಿಕರು ಮತ್ತು ಸ್ಥಳೀಯರು ಪೊಲೀಸರಿಗೆ ರವಾನಿಸಿದರು.ಸುದ್ದಿ ತಿಳಿದಾಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು. ಪ್ರಾಥಮಿಕ ವರದಿ ಪ್ರಕಾರ ದುರುಳರು ಬಾಲಕಿಯನ್ನು ಕಿಡ್ನ್ಯಾಪ್​ ಮಾಡಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯನ್ನು ಕೊಲೆ ಮಾಡಿ ಈ ಪಾಳು ಬಿದ್ದ ಮನೆಯಲ್ಲಿ ಮೃತದೇಹವನ್ನಿಟ್ಟಿದ್ದಾರೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.ಬಾಲಕಿ ಶವವನ್ನು ವಶಕ್ಕೆ ಪಡೆದ ಪೊಲೀಸರು, ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಈ ವೇಳೆ ಬಾಲಕಿಯ ಪೋಷಕರ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು