Ad

ಸಿಕ್ಕಿಂನಲ್ಲಿ ಪ್ರವಾಹ; 6 ಸಾವು, 1,200ಕ್ಕೂ ಹೆಚ್ಚು ಪ್ರವಾಸಿಗರಿಗೆ ಸಂಕಷ್ಟ

Sikkim

ಗುವಾಹಟಿ: ಭಾರೀ ಮಳೆಯಿಂದ ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ 6 ಮಂದಿ ಸಾವಿಗೀಡಾಗಿದ್ದು, 1,200ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.

Ad
300x250 2

ಹಲವು ರಾಜ್ಯಗಳ 1,200ಕ್ಕೂ ಹೆಚ್ಚು ಪ್ರವಾಸಿಗರು, ಬಾಂಗ್ಲಾದೇಶದ 10, ನೇಪಾಳದ 3 ಹಾಗೂ ಥೈಲ್ಯಾಂಡ್‍ನ ಇಬ್ಬರು ಸೇರಿ ಒಟ್ಟು 15 ವಿದೇಶಿ ಪ್ರವಾಸಿಗರು ಮಂಗನ್ ಪಟ್ಟಣದಿಂದ ಸುಮಾರು 50 ಕಿಮೀ ದೂರದಲ್ಲಿರುವ ಲಾಚುಂಗ್ ಗ್ರಾಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಿಕ್ಕಿಬಿದ್ದ ಪ್ರವಾಸಿಗರನ್ನು ವಿಮಾನದಲ್ಲಿ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿ.ಬಿ ಪಾಠಕ್ ಕೇಂದ್ರದೊಂದಿಗೆ ಮಾತುಕತೆ ನಡೆಸಿದ್ದಾರೆ. ಮಳೆ ಮುಂದುವರಿದರೆ ರಸ್ತೆ ಮಾರ್ಗದ ಮೂಲಕ ಕರೆತರುವ ಪ್ರಯತ್ನ ಮಾಡಲಾಗುತ್ತದೆ. ಪ್ರವಾಹದಿಂದ ರಸ್ತೆ ಮಾರ್ಗಗಳು ಹಾನಿಗೀಡಾಗಿದ್ದು, ಸಂಪರ್ಕವನ್ನು ಪುನಃಸ್ಥಾಪಿಸಲು ಒಂದು ವಾರ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad