ವಾಷಿಂಗ್ಟನ್: ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ಹಡಗೊಂದು ಡಿಕ್ಕಿ ಹೊಡೆದು ನೀರಿನಲ್ಲಿ ಮುಳುಗಿ ಆರು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಂಟೈನರ್ ಹಡಗು ಡಾಲಿಯನ್ನು ಭಾರತೀಯ ಸಿಬ್ಬಂದಿ ನಿರ್ವಹಿಸುತ್ತಿದ್ದರು. ಮಂಗಳವಾರ ಮಧ್ಯರಾತ್ರಿಯ ಸುಮಾರಿಗೆ ಸಿಬ್ಬಂದಿ ನಿಯಂತ್ರಣ ತಪ್ಪಿದ ಹಡಗು ಸೇತುವೆಗೆ ಡಿಕ್ಕಿ ಹೊಡೆದಿತ್ತು. ಹಡಗಿನಲ್ಲಿದ್ದ ಎಲ್ಲಾ ಭಾರತೀಯ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಸೇತುವೆಯ ಮೇಲೆ ರಿಪೇರಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾಣೆಯಾಗಿದ್ದಾರೆ. ಅವರು ಸೇತುವೆಯ ಮೇಲಿನ ಗುಂಡಿಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದರು.
ನಾವು ಈಗಾಗಲೇ ಸಾಕಷ್ಟು ಸಮಯ ಹುಡುಕಾಡಿದ್ದೇವೆ. ನೀರಿನ ತಾಪಮಾನ ಹಾಗೂ ಪರಿಸ್ಥಿತಿ ಅವಲೋಕಿಸಿದರೆ ಅವರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಯುಎಸ್ ಕೋಸ್ಟ್ ಗಾರ್ಡ್ ರಿಯರ್ ಅಡ್ಮಿರಲ್ ಶಾನನ್ ಗಿಲ್ರೆಥ್ ತಿಳಿಸಿದ್ದಾರೆ.