ಪೂರ್ವ ಆಫ್ರಿಕಾ: ಮಾರಿಷಸ್ನಲ್ಲಿ ಶಿವರಾತ್ರಿಗೂ ಮುನ್ನ ಹಮ್ಮಿಕೊಳ್ಳಲಾಗಿದ್ದ ಪೂಜೆಯ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ದೇವರ ವಿಗ್ರಹವು ವಿದ್ಯುತ್ ತಂತಿಗೆ ಸ್ಪರ್ಶಿಸಿದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದು, ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಪೂರ್ವ ಆಫ್ರಿಕಾದ ಮಾರಿಷಸ್ನ ಹಿಂದೂ ಸಮುದಾಯವು ಪವಿತ್ರವೆಂದು ಪರಿಗಣಿಸುವ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಮುಂಚಿತವಾಗಿ ಯಾತ್ರಿಕರು ಗ್ರ್ಯಾಂಡ್ ಬೇಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು.
ಮಹಾಶಿವರಾತ್ರಿಯನ್ನು ಫಾಲ್ಗುಣ ಮಾಸದಲ್ಲಿ ಆಚರಿಸಲಾಗುತ್ತದೆ. ಈ ವರ್ಷ, ಮಹಾಶಿವರಾತ್ರಿ ಮಾರ್ಚ್ 8 ರಂದು ಬರುತ್ತದೆ.