Categories: ವಿದೇಶ

700 ತಾಲಿಬಾನಿಗಳನ್ನು ಹತ್ಯೆಗೈದ ಪಂಜ್ಶೀರ್ ಪಡೆ

 ಅಫ್ಘಾನಿಸ್ಥಾನ :   ತಾಲಿಬಾನ್ ಮತ್ತು ಪಂಜ್ಶೀರ್ ಯೋಧರ ನಡುವಿನ ಕದನ ಮುಂದುವರೆದಿದ್ದು, ಈವರೆಗೆ 700ಕ್ಕೂ ಹೆಚ್ಚು ತಾಲಿಬಾನಿಗಳನ್ನು ಹತ್ಯೆ ಮಾಡಿರುವುದಾಗಿ ಪ್ರತಿರೋಧ ಪಡೆ ಹೇಳಿಕೊಂಡಿದೆ. “ನಮ್ಮನ್ನು ನಾಶಪಡಿಸಲು ಬಂದ 700ಕ್ಕೂ ಹೆಚ್ಚು ತಾಲಿಬಾನ್ ಉಗ್ರರನ್ನು ಹತ್ಯೆಗೈಯಲಾಗಿದೆ. ಸಾವಿರಕ್ಕೂ ಅಧಿಕ ಉಗ್ರರು ಪ್ರತಿರೋಧ ಪಡೆಯ ವಶದಲ್ಲಿದ್ದಾರೆ” ಎಂದು ಪಂಜ್ಶೀರ್ ಪಡೆಯ ವಕ್ತಾರ ಫಾಹಿಮ್‌ ದಶ್ಟಿ ತಿಳಿಸಿದ್ದಾರೆ.

ದಿನೇ ದಿನೇ ತಾಲಿಬಾನ್ ಗಳು ಪಂಜ್‌ಶೀರ್‌ ಕಣಿವೆಯ ವಶಪಡಿಸಿಕೊಳ್ಳಲು ತಂಣತ್ರಗಳನ್ನು ಹೆಣೆಯುತ್ತಿದ್ದು, ಅದಕ್ಕೆ ಪ್ರತಿರೋಧ ಪಡೆಯು ಪ್ರತಿತಂತ್ರದ ಮೂಲಕ ಹಿಮ್ಮೆಟ್ಟಿಸುತ್ತಿದೆ. ಹೀಗಾಗಿ ಒಂದು ಪ್ರಾಂತ್ಯದಿಂದ ಮತ್ತೊಂದು ಪ್ರಾಂತ್ಯಕ್ಕೆ ಸರಕು ಸಾಗಣೆ ಮಾಡಲು ತಾಲಿಬಾನ್ ಉಗ್ರ ಸಂಘಟನೆಗೆ ಆಗುತ್ತಿಲ್ಲ ಎಂದು ಕೆಲವು ಸುದ್ದಿ ಸಂಸ್ಥೆಗಳ ವರದಿ ತಿಳಿಸಿದೆ.

ಆ.31ರಂದು ಇಡೀ ಅಮೆರಿಕ ಸೇನೆಯನ್ನು ವಾಪಸ್ ಕಳುಹಿಸಿದ ಬಳಿಕ ಇಡೀ ಅಫ್ಘಾನಿಸ್ಥಾನವನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಪಂಜ್ಶೀರ್ ಗಾಗಿ ತಾಲಿಬಾನ್ ಹೋರಾಟ ನಡೆಸುತ್ತಿದ್ದು, ಪ್ರಾಂತ್ಯದ ಏಳು ಜಿಲ್ಲೆಗಳಲ್ಲಿ ನಾಲ್ಕು ಜಿಲ್ಲೆ ತಾಲಿಬಾನ್ ಪಡೆಗಳ ನಿಯಂತ್ರಣದಲ್ಲಿದೆ ತರಲಾಗಿದೆ ಎಂದು ತಾಲಿಬಾನ್ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.

Sneha Gowda

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

5 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

6 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

7 hours ago