ಬಾಂಗ್ಲಾದೇಶ : ರಾಜಧಾನಿ ಢಾಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಮತ್ತೆ ಹಿಂಸಾಚಾರಕ್ಕೆ ತಿರುಗಿದ್ದು ಸುಮಾರು 72 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಬಾಂಗ್ಲಾದಲ್ಲಿನ ಭಾರತೀಯರು ಎಚ್ಚರವಾಗಿರುವಂತೆ ಹಾಗೂ ಸದಾ ಸಂಪರ್ಕದಲ್ಲಿ ಇರುವಂತೆ ಕೇಂದ್ರ ಸರ್ಕಾರ ಹೇಳಿದೆ.
ಆಡಳಿತದಲ್ಲಿರುವ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಬಾಂಗ್ಲಾದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರ ನಡುವೆ ಘರ್ಷಣೆ ಉಂಟಾಗಿದೆ. ಈ ವೇಳೆ ಸಂಘರ್ಷದಲ್ಲಿ 72 ಜನರು ಮೃತಪಟ್ಟಿದ್ದಾರೆ. ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿಂಸಾಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
Ad