ನ್ಯೂಯಾರ್ಕ್: ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ಸಿಆರ್‌ಜೆ -900 ವಿಮಾನವು ರನ್‌ವೇ 4 ರಲ್ಲಿ ಲ್ಯಾಂಡ್ ಆಗಿತ್ತು. ಈ ವೇಳೆ ರನ್ ವೇ ನಲ್ಲೇ ಫೈರ್ ಟ್ರಕ್‌ಗೆ ವಿಮಾನ ಡಿಕ್ಕಿಯಾಗಿದೆ. ಈ ಅವಘಡದ ಬಳಿಕ ಒಳ ಬರುವ ವಿಮಾನಗಳಿಗೆ ಏರ್‌ಪೋರ್ಟ್ ಮುಚ್ಚಲಾಗಿದೆ.
ವಿಮಾನ ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ವೀಡಿಯೋದಲ್ಲಿ ವಿಮಾನದ ಮುಂಭಾಗಕ್ಕೆ ಹಾನಿಯಾಗಿರುವುದು ಕಾಣಿಸುತ್ತದೆ.
— Breaking911 (@Breaking911) March 23, 2026

