News Karnataka Kannada
Friday, May 03 2024
ವಿದೇಶ

ಕರ್ನಾಟಕಕ್ಕೆ ಮತ್ತೆ ಶಾಕ್‌: ಪ್ರತಿದಿನ 5000 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಸುಪ್ರೀಂ ಆದೇಶ

Another shock to Karnataka: Supreme order to release 5000 thousand cusecs of water every day
Photo Credit : News Kannada

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ದಶಕಗಳಿಂದ ಅನ್ಯಾಯವಾಗುತ್ತಲೇ ಇದೆ. ನಮ್ಮ ಸರ್ಕಾರದ ಕಾನೂನು ವೈಫಲ್ಯವೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಗೊತ್ತಿಲ್ಲ. ಒಟ್ಟಿನಲ್ಲಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರು, ಜನರು ಮೋಸಹೋಗುವಂತಾಗಿದೆ. ಇದೀಗ ತಮಿಳುನಾಡಿಗೆ ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಎತ್ತಿಹಿಡಿದೆ. ಹೀಗಾಗಿ ಬರ ಪರಿಸ್ಥಿತಿ ನಡುವೆ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕರ್ನಾಟಕದಲ್ಲಿ ಈ ಬಾರಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಆದರೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದವು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀಡು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಗವಾಯ್‌ ಆದೇಶದಲ್ಲಿ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು