News Karnataka Kannada
Thursday, May 02 2024
ವಿದೇಶ

ಮಣಿಪುರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ 11 ಮಂದಿ ಗ್ರಾಮಸ್ಥರು ಸಾವು

At least 11 villagers killed in firing by suspected militants in Manipur
Photo Credit : News Kannada

ಇಂಫಾಲ: ಇಂಫಾಲ ಪೂರ್ವ ಜಿಲ್ಲೆಯ ಖಮೆಲಾಕ್ ಗ್ರಾಮದಲ್ಲಿ ಶಂಕಿತ ಉಗ್ರರು ಗುಂಡಿ ದಾಳಿ ನಡೆಸಿದ್ದು ಕನಿಷ್ಠ 11 ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಖಮೆಲಾಕ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿದ್ದು, ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗ್ರಾಮಸ್ಥರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾತ್ರಿ ವೇಳೆ ಭೋಜನ ಮುಗಿಸಿ ಗ್ರಾಮಸ್ಥರು ಮಲಗಿದ್ದ ವೇಳೆ ದಾಳಿ ನಡೆದಿದೆ.

ಗಾಯಾಳುಗಳನ್ನು ತಕ್ಷಣವೇ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು