ದುಬೈ: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿಯಿಂದ ದುಬೈನಲ್ಲಿರೋ ಜನರು ಭಯಭೀತರಾಗಿದ್ದು, ದುಬೈ ಏರ್ಪೋರ್ಟ್‌ ಮೇಲೆ ಕೂಡಾ ದಾಳಿಗಳು ನಡೆದಿದ್ದು, ದುಬೈಗೆ ತೆರಳುವ ವಿಮಾನಗಳ ಹಾರಾಟವನ್ನ ರದ್ದುಗೊಳಿಸಲಾಗಿದೆ.

ಲಕ್ಷಾಂತರ ಪ್ರಯಾಣಿಕರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ 150 ಮಂದಿ ಕೂಡ ದುಬೈನಲ್ಲೇ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇರಾನ್ ದಾಳಿಯಲ್ಲಿ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ. ದಾಳಿಯಿಂದ ನಾಲ್ವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವಿಮಾನ ನಿಲ್ದಾಣದ ಹೇಳಿಕೆ ತಿಳಿಸಿದೆ.

ದುಬೈ ಮತ್ತು ಅಬುಧಾಬಿ ಮೇಲಿನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ವಿಮಾನಗಳ ಹಾರಟ ಸ್ಥಗಿತವಾಗಿದೆ. ಹೀಗಾಗಿ ಲಕ್ಷಾಂತರ ಪ್ರಯಾಣಿಕರು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡರು. ವಿಮಾನ ನಿಲ್ದಾಣದ ಹೊರತಾಗಿ, ಬುರ್ಜ್ ಅಲ್ ಅರಬ್ ಹೋಟೆಲ್‌ಗಳ ಮೇಲೆ ಕೂಡಾ ದಾಳಿಗಳು ನಡೆದಿದ್ದು, ಬೆಂಕಿ ಹೊತ್ತಿಕೊಂಡಿತು. ಅಧಿಕಾರಿಗಳು ತಕ್ಷಣ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು ಸದ್ಯ ಯಾರಿಗೂ ಯಾವುದೇ ಅಪಾಯವಾಗಿಲ್ಲ, ಯಾವುದೇ ಗಾಯಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇನ್ನು ದುಬೈನಲ್ಲಿ ವಿದ್ಯಾರ್ಥಿಗಳು ಸೇರಿ 150 ಹೆಚ್ಚು ಕನ್ನಡಿಗರು ಸಿಲುಕಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್​ ಹೇಳಿಕೆ ನೀಡಿದ್ದಾರೆ. ಅವರೆಲ್ಲಾ ಸಂಪರ್ಕಿಸಿ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮುಂದುವರೆದಿದೆ.