ಕೈರೊ; ಗಾಜಾಪಟ್ಟಿಯಲ್ಲಿರುವ ಅಲ್ ಶಿಫಾ ಆಸ್ಪತ್ರೆಯಲ್ಲಿ ಕಳೆದ ಮೂರುದಿನಗಳಲ್ಲಿ ಕನಿಷ್ಠ 32 ರೋಗಿಗಳು ಮೃತಪಟ್ಟಿದ್ದಾರೆ ಎಂದು ಪ್ಯಾಲಿಸ್ತೇನ್ ಆರೋಗ್ಯ ಸಚಿವಾಲಯ ಹೇಳಿದೆ. ಆಸ್ಪತ್ರೆಗೆ ವಿದ್ಯುತ್ ವ್ಯತ್ಯಯವಾದ ಹಿನ್ನಲೆಯಲ್ಲಿ ಶನಿವಾರ ವೈದ್ಯಕೀಯ ಸೇವೆಗಳು ಸ್ಥಗಿತಗೊಂಡವು, ಜೊತೆಗೆ ಭಾನುವಾರ ಆಸ್ಪತ್ರೆ ಸುತ್ತಮುತ್ತಲಿನ ಸ್ಥಳಗಳ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿತ್ತು.
ಆಸ್ಪತ್ರೆಯಲ್ಲಿ ಹಲವರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಆಂಬುಲೆನ್ಸ್ ಗಳ ಮೇಲೆ ಗುಂಡಿನ ದಾಳಿ ನಡೆಯುತ್ತಿರುವ ಕಾರಣ ಅವು ನಿಂತಲ್ಲೆ ನಿಂತಿವೆ ಎಂದು ಆಸ್ಪತ್ರೆ ನಿರ್ದೇಶಕ ಮೊಹಮ್ಮದ್ ಅಬು ಸೆಲ್ಮಿಯಾ ತಿಳಿಸಿದ್ದಾರೆ.
ಗಾಜಾದ ಆಸ್ಪತ್ರೆ ಮೇಲೆ ದಾಳಿ ಕನಿಷ್ಠ 32 ರೋಗಿಗಳು ಸಾವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.