News Karnataka Kannada
Monday, May 06 2024
ವಿದೇಶ

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ಸಚಿವೆಯ ಮನೆಯನ್ನೇ ಸುಟ್ಟ ದುಷ್ಕರ್ಮಿಗಳು

Attackers burn lone woman minister's official residence in Manipur
Photo Credit :

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರ ಮತ್ತೊಂದು ಭೀಕರ ದುಷ್ಕೃತ್ಯಕ್ಕೆ ಸಾಕ್ಷಿಯಾಗಿದೆ. ದುಷ್ಕರ್ಮಿಗಳು ಬುಧವಾರ ಸಂಜೆ ಇಂಫಾಲ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್ ಪ್ರದೇಶದಲ್ಲಿ ಮಣಿಪುರದ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್ ಅವರ ಅಧಿಕೃತ ನಿವಾಸವನ್ನು ಸುಟ್ಟು ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಕೋರರು ಅವರ ಅಧಿಕೃತ ಬಂಗಲೆಯನ್ನು ಸುಟ್ಟುಹಾಕಿದಾಗ ರಾಜ್ಯದ ಏಕೈಕ ಮಹಿಳಾ ಸಚಿವೆ ಕಿಪ್ಜೆನ್ ಅವರು ಮನೆಯಲ್ಲಿ ಇರಲಿಲ್ಲ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದಾಳಿಕೋರರನ್ನು ಸೆರೆಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಳೆದ ವರ್ಷದ ಅಸೆಂಬ್ಲಿ ಚುನಾವಣೆಯಲ್ಲಿ ಬುಡಕಟ್ಟು ಪ್ರಾಬಲ್ಯವಿರುವ ಕಾಂಗ್‌ಪೋಕ್ಪಿ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಕಿಪ್‌ಗೆನ್, ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ನೇತೃತ್ವದ ನೇತೃತ್ವದ 12 ಸದಸ್ಯರ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿದ್ದಾರೆ.
ಈ ಹಿಂದೆ, ರಾಜ್ಯದ ವಿವಿಧ ಪ್ರದೇಶಗಳಲ್ಲಿ ದಾಳಿಕೋರರು ಪಿಡಬ್ಲ್ಯೂಡಿ ಸಚಿವ ಕೊಂತೌಜಂ ಗೋವಿಂದಸ್ ಸೇರಿದಂತೆ ಹಲವು ಸಚಿವರು ಮತ್ತು ಶಾಸಕರ ಮನೆಗಳನ್ನು ಸುಟ್ಟು ಹಾಕಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು