ಬಾಂಗ್ಲಾದೇಶ : ಕಳೆದ ಕೆಲದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರ ಇದೀಗ ಉಲ್ಬಣಿಸಿದ್ದು, ಅಲ್ಲಿರುವ ಸುಮಾರು 300 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ಮರಳಿದ್ದಾರೆ. ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದಾರೆ. ದೇಶವಿಡೀ ಕರ್ಫ್ಯೂ ಹಾಕಲಾಗಿದೆ.
ದೇಶದ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ಮತ್ತು ಗಲಭೆಗಳು ನಡೆಯುತ್ತಿದೆ. ಸುಮಾರು 15,000 ಭಾರತೀಯ ಪ್ರಜೆಗಳು ಬಾಂಗ್ಲಾದಲ್ಲಿದ್ದು, ಅವರೆಲ್ಲ ಕ್ಷೇಮವಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಹೇಳಿದೆ.
ಭಾರತದಕ್ಕೆ ಹಿಂದಿರುಗುತ್ತಿರುವ ಬಹುತೇಕ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಹರ್ಯಾಣ, ಮೇಘಾಲಯ ಹಾಗೂ ಜಮ್ಮು ಮತ್ತು ಕಾಶ್ಮೀರದ ಮೂಲದವರಾಗಿದ್ದಾರೆ. ಬಾಂಗ್ಲಾದೇಶದಲ್ಲಿ ಎಂಬಿಬಿಎಸ್ ಪದವಿ ಪಡೆಯುತ್ತಿದ್ದರು. ಅಗರ್ತಲಾ ಬಳಿಕ ಅಖುರ್ ಗಡಿಯ ಮೂಲಕ ಬಹುತೇಕ ವಿದ್ಯಾರ್ಥಿಗಳು ವಾಪಸಾಗಿದ್ದಾರೆ. ಸಾಕಷ್ಟು ದಿನಗಳು ಕಾದ ಬಳಿಕ ಅಂತಿಮವಾಗಿ ಬಾಂಗ್ಲಾದೇಶವನ್ನು ಬಿಡಲು ನಿರ್ಧರಿಸಿದ್ದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.

