ಇಸ್ಲಾಮಾಬಾದ್:‌ ಬಸ್‌ ಕಮರಿಗೆ ಉರುಳಿ ಬಿದ್ದು ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಕನಿಷ್ಠ 28 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.

ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 22 ಮಂದಿ ಬಾಸಿಮಾದ ಸಿವಿಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಹಾಗೂ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದಾರೆ

ಬಸ್ ಟರ್ಬತ್‌ನಿಂದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾಕ್ಕೆ ಹೋಗುತ್ತಿತ್ತು. ಕ್ವೆಟ್ಟಾದಿಂದ ಸುಮಾರು 700 ಕಿಮೀ ದೂರದಲ್ಲಿರುವ ವಾಶುಕ್ ಪಟ್ಟಣದ ಬಳಿ ತಿರುವಿನಲ್ಲಿ ಬಸ್‌ನ ಟೈಯರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಮರಿಗೆ ಬಿದ್ದಿದೆ.