ಬಲೂಚಿಸ್ತಾನ್: ಪ್ರಯಾಣಿಕರನ್ನು ತುಂಬಿದ್ದ ಬಸ್ವೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಘಟನೆಯ ಪರಿಣಾಮ ಮಹಿಳೆ ಮತ್ತು ಮಕ್ಕಳು ಸೇರಿ 28 ಜನರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಟರ್ಬತ್ನಿಂದ ಕ್ವೆಟ್ಟಾಗೆ ತೆರಳುತ್ತಿದ್ದ ಬಸ್ ಬಲೂಚಿಸ್ತಾನ್ನಿಂದ 700 ಕಿಮೀ ದೂರದಲ್ಲಿರುವ ವಾಶುಕ್ ಪಟ್ಟಣದಲ್ಲಿ ಬರುವ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ವೇಗವಾಗಿ ಸಂಚರಿಸುತ್ತಿದ್ದ ಕಾರಣ ಅಪಘಾತ ಸಂಭವಿಸಿದೆ.
ಬಸ್ ಟೈರ್ ಒಡೆದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 22 ಜನರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬಾಸಿಮಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

