ವಿದೇಶ

ನಿಜ್ಜರ್‌ ಹತ್ಯೆ ತನಿಖೆಯಲ್ಲಿ ಸಹಕರಿಸುವಂತೆ ಭಾರತಕ್ಕೆ ಕೆನಡಾ ಸೂಚನೆ

ವಾಷಿಂಗ್ಟನ್: ಭಾರತದಲ್ಲಿ ಕೆನಡಾ ರಾಜತಾಂತ್ರಿಕ ಸಿಬ್ಬಂದಿ ಕಡಿತಕ್ಕೆ ಒತ್ತಾಯಿಸುವ ಭಾರತದ ನಿಲುವು ಸರಿಯಲ್ಲ ಎಂದು ಅಮೆರಿಕ ಹೇಳಿದೆ. ಖಲಿಸ್ತಾನಿ ಪರ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಬಳಿಕ ಕೆನಡಾ ತನ್ನ 41 ರಾಜತಾಂತ್ರಿಕರು ಮತ್ತು 42 ಮಂದಿ ಅವಲಂಬಿತರನ್ನು ಭಾರತದಿಂದ ಸ್ಥಳಾಂತರಿಸಿದೆ.

ಕೆನಡಾದ ರಾಜತಾಂತ್ರಿಕರು ಭಾರತದಿಂದ ನಿರ್ಗಮಿಸಿರುವ ಬಗ್ಗೆ ನಾವು ಕಳವಳಗೊಂಡಿದ್ದೇವೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಶುಕ್ರವಾರ ಹೇಳಿದ್ದಾರೆ. ಅಲ್ಲದೆ ಹತ್ಯೆ ಸಂಬಂಧ ಕೆನಡಾದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಸಹಕರಿಸಲು ನಾವು ಭಾರತ ಸರ್ಕಾರವನ್ನು ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನು ಮುಂದೆ ಭಾರತದಲ್ಲಿ ಕೆನಡಾದ 21 ರಾಜತಾಂತ್ರಿಕರು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದರು.

ಕೆನಡಾದ ರಾಜತಾಂತ್ರಿಕ ಮಿಷನ್‌ನ ಮಾನ್ಯತೆ ಪಡೆದ ಸದಸ್ಯರು ಅನುಭವಿಸುವ ಸವಲತ್ತುಗಳು ಮತ್ತು ವಿನಾಯಿತಿಗಳಿಗೆ ಸಂಬಂಧಿಸಿದಂತೆ 1961 ರ ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಒಪ್ಪಂದದ ಅಡಿಯಲ್ಲಿ ಭಾರತವು ತನ್ನ ಬಾಧ್ಯತೆಗಳನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಮಿಲ್ಲರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ಭಾರತವು ಏಕಪಕ್ಷೀಯವಾಗಿ ರಾಜತಾಂತ್ರಿಕ ಸವಲತ್ತುಗಳು ಮತ್ತು ವಿನಾಯಿತಿಗಳನ್ನು ರದ್ದುಗೊಳಿಸಿದೆ ಎಂದು ಜೋಲಿ ಆರೋಪಿಸಿದ್ದರು. ಮತ್ತು ನವದೆಹಲಿಯ “ಅವಿವೇಕದ” ನಡೆ ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದ್ದರು. ಈ ವಿಚಾರವನ್ನು ಭಾರತ ತಿರಸ್ಕರಿಸಿತ್ತು.

Ashika S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

7 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

37 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

53 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago