Bengaluru 21°C
Ad

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್!

ದೇಶದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾವನ್ನು ನಿಷೇಧಿಸಲು ಮುಂದಾಗಿದ್ದೇವೆ ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ.

ಆಸ್ಟ್ರೇಲಿಯಾ : ದೇಶದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾವನ್ನು ನಿಷೇಧಿಸಲು ಮುಂದಾಗಿದ್ದೇವೆ ಎಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೇಳಿದ್ದಾರೆ.

Ad

ಅಲ್ಲದೇ ಮಕ್ಕಳು ಸ್ವಿಮ್ಮಿಂಗ್ ಪೂಲ್, ಟೆನ್ನಿಸ್ ಕೋರ್ಟ್, ಮೈದಾನದಲ್ಲಿ ನೋಡುವುದಕ್ಕಿಂತ ಹೆಚ್ಚಾಗಿ ಮೊಬೈಲ್ ಮುಂದೆ ಇರುವುದನ್ನು ಗಮನಿಸಿದ್ದೇನೆ. ಇದು ಭವಿಷ್ಯದಲ್ಲಿ ಮಕ್ಕಳ ಮೇಲೆ ಬಹಳ ದೊಡ್ಡ ಪರಿಣಾಮ ಬೀರುತ್ತವೆ, ಈ ನಿಟ್ಟಿನಲ್ಲಿ ಸೋಶಿಯಲ್ ಮೀಡಿಯಾವನ್ನು ಬ್ಯಾನ್ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

Ad

ಕಳೆದ ತಿಂಗಳು ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವ ಕುರಿತು ಯೂಗೋವ್ ಸಮೀಕ್ಷೆಯನ್ನು ಮಾಡಲಾಗಿತ್ತು. ಇದರಲ್ಲಿ ಶೇ. 61 ಪ್ರತಿಶತದಷ್ಟು ಆಸ್ಟ್ರೇಲಿಯನ್ನರು 17 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸುವುದನ್ನು ಬೆಂಬಲಿಸಿದ್ದಾರೆ. ಈ ಹಿಂದೆ 14 ವರ್ಷದೊಳಗಿನ ಮಕ್ಕಳು ಸೋಶಿಯಲ್ ಮೀಡಿಯಾ ಬಳಸುವಂತಿಲ್ಲ ಎಂಬ ಕಾನೂನು ಇತ್ತು, ಆದರೆ ಇದೀಗ ಆ ಕಾನೂನನ್ನು ತಿದ್ದುಪಡಿ ಮಾಡಲಾಗಿದ್ದು, 16 ವರ್ಷದ ವರೆಗೆ ವಿಸ್ತರಿಸಲಾಗಿದೆ.

Ad
Ad
Ad
Nk Channel Final 21 09 2023