Categories: ವಿದೇಶ

ಚಂದ್ರನಲ್ಲಿ ನೀರಿರುವ ಅಂಶವನ್ನು ಪತ್ತೆಹಚ್ಚಿದ ಚೀನೀ ವಿಜ್ಞಾನಿಗಳು!

ಚಂದ್ರನಲ್ಲಿ ನೀರಿರುವ ಅಂಶವನ್ನು ಚೀನೀ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಚಂದ್ರನ ಪರಿಶೋಧನೆಗೆ ತೆರಳಿದ್ದ “ಓಷನ್ ಆಫ್ ಸ್ಟಾರ್ಮ್ಸ್” ವ್ಯೂಮ ನೌಕೆಯು ಚಂದ್ರನ ಅಂಗಣದಲ್ಲಿ ಸಂಗ್ರಹಿಸಿದ ಘನೀಕೃತ ಲಾವಾದ ಅವಶೇಷಗಳಲ್ಲಿ ನೀರಿನ ಅಂಶ ಪತ್ತೆಯಾಗಿದೆ ಎಂದು ವಿಜ್ಞಾನಿಗಳು ಘೋಷಿಸಿದ್ದಾರೆ.

ಹೈಡ್ರಾಕ್ಸಿಲ್ ರೂಪದಲ್ಲಿ ನೀರಿನ ಅಂಶ ಪತ್ತೆಯಾಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಚಂದ್ರನ ಸಂಶೋಧನೆಯಲ್ಲಿ ಇದೊಂದು ಮಹತ್ವದ ಶೋಧನೆಯಾಗಲಿದೆ ಎಂದು ಹೇಳಿದ್ದಾರೆ. ನೀರಿನಲ್ಲಿ ಎರಡು ಹೈಡ್ರೋಜನ್ ಪರಮಾಣುವಿನೊಂದಿಗೆ ಒಂದು ಆಮ್ಲಜನಕದ ಪರಮಾಣು ಇರುತ್ತದೆ. ಚಂದ್ರನ ಮೇಲ್ಮೈಯಲ್ಲಿ ಸೂರ್ಯನ ಪ್ರಖರ ಕಿರಣಗಳು ಸ್ಪರ್ಶಿಸಿದಾಗ ಜರುಗುವ ರಾಸಾಯನಿಕ ಕ್ರಿಯೆಗಳ ಪರಿಣಾಮವಾಗಿ ಚಂದ್ರನ ಮೇಲೆ ನೀರಿನ ಸೆಲೆಯಿದೆ ಎಂದು ನಂಬಲಾಗಿದೆ.

ಪೌರಾಣಿಕ ಚೀನೀ ದೇವತೆ ʼಚಂದ್ರನʼ ಹೆಸರನ್ನು ಹೊತ್ತಿರುವ ಚೀನಾದ ಚಾಂಗ್-5 ಮಿಷನ್ ನಡಿ ನಭಕ್ಕೆ ಹಾರಿದ್ದ “ಓಷನ್ ಆಫ್ ಸ್ಟಾರ್ಮ್ಸ್” ಚಂದ್ರನ ಅಂಗಣದಿಂದ ಮಣ್ಣು ಮತ್ತು ಬಂಡೆಯ ಮಾದರಿಯನ್ನು ಡಿಸೆಂಬರ್ 2020 ರಲ್ಲಿ ಹೊತ್ತುತಂದಿತ್ತು.
ಚಂದ್ರನ ಮೇಲೆ ನೀರಿನ ಉಪಸ್ಥಿತಿಯು ಸೌರವ್ಯೂಹದ ವಿಕಾಸದ ಮೇಲೆ ಹೆಚ್ಚು ಬೆಳಕು ಚೆಲ್ಲಲಿದೆ ಎಂದು ವಿಜ್ಞಾನಿಗಳು ವಿಶ್ಲೇಷಿಸಿದ್ದಾರೆ.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago