ಡೆಹ್ರಾಡೂನ್: ನಿರಂತರ ಮಳೆಯಿಂದಾಗಿ ಶುಕ್ರವಾರ ಉತ್ತರಾಖಂಡದಲ್ಲಿ ಮೇಘಸ್ಫೋಟ, ದಿಢೀರ್ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ರುದ್ರಪ್ರಯಾಗ ಮತ್ತು ಚಮೋಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿವೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಮೂಲಸೌಕರ್ಯಗಳು ಕುಸಿದು ಬಿದ್ದಿರುವುದರಿಂದ ಹಲವಾರು ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

