ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಪರಿಶೀಲಿಸದ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅದೇ ವೇಳೆ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷಕ್ಕೂ ಇದೇ ರೀತಿಯ ನೋಟಿಸ್ ನೀಡಿಲಾಗಿದೆ.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ “ಸುಳ್ಳು” ಮತ್ತು “ಪರಿಶೀಲಿಸದ” ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ಮಾಡಿದ ದೂರಿನ ಮೇರೆಗೆ ಚುನಾವಣಾ ಸಮಿತಿಯು ಗುರುವಾರ ರಾತ್ರಿ 8 ಗಂಟೆಯೊಳಗೆ ಅವರ ಹೇಳಿಕೆಯನ್ನು ವಿವರಿಸುವಂತೆ ಕೇಳಿದೆ.
ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಿದೆ ಎಂಬ “ಆಧಾರರಹಿತ ಮತ್ತು ಸುಳ್ಳು” ಹೇಳಿಕೆಯನ್ನು ಪ್ರಿಯಾಂಕಾ ಗಾಂಧಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ