ಕೀವ್ : ಉಕ್ರೇನ್–ರಷ್ಯಾ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಶನಿವಾರ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ, ಉಕ್ರೇನ್ ರಾಜಧಾನಿ ಕೀವ್‌ಗೆ ಸಮೀಪದ ಬುಚಾ ಜಿಲ್ಲೆಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ.
ಬುಚಾ ಪಟ್ಟಣದಲ್ಲಿ 50ಕ್ಕೂ ಹೆಚ್ಚು ವಸತಿ ಕಟ್ಟಡಕ್ಕೆ ಹಾನಿಯಾಗಿದೆ. ದಾಳಿಯ ಬೆನ್ನಲ್ಲೇ, ಹಲವು ಕಟ್ಟಡಗಳು, ರೆಸ್ಟೊರೆಂಟ್‌ಗಳಿಂದ ದಟ್ಟ ಹೊಗೆ ಮತ್ತು ಬೆಂಕಿ ಮೇಲಕ್ಕೆ ಎದ್ದಿದೆ ಎಂದು ಸ್ಥಳೀಯ ಮಿಲಿಟರಿ ಆಡಳಿತದ ಮುಖ್ಯಸ್ಥ ತೈಮೂರ್ ಟಕಾಚೆಂಕೊ ಹೇಳಿದ್ದಾರೆ.
ಉಕ್ರೇನ್ ರಾಜಧಾನಿ ಮತ್ತು ಸುತ್ತಲಿನ ಪಟ್ಟಣಗಳನ್ನು ಗುರಿಯಾಗಿ ರಷ್ಯಾ ಮೂರು ದಿನಗಳಿಂದ ಸತತ ದಾಳಿ ನಡೆಸುತ್ತಿದ್ದು, ಮೂಲಸೌಕರ್ಯ ವ್ಯವಸ್ಥೆಗೆ ಅಪಾರ ಹಾನಿಯಾಗಿದೆ. ಜನಜೀವನ ಅಸ್ತವ್ಯಸ್ಥಗೊಂಡಿದೆ ಎಂದು ಮೂಲಗಳು ಹೇಳಿವೆ.

