News Karnataka Kannada
Sunday, May 05 2024
ವಿದೇಶ

ಕಾಂಗ್ರೆಸ್‌ 100 ಅಭ್ಯರ್ಥಿಗಳ ಪಟ್ಟಿ ಅಂತಿಮ: ಸಿಎಂ ಬೊಮ್ಮಾಯಿ ಕ್ಷೇತ್ರದಿಂದ ಕುಲಕರ್ಣಿ ಸ್ಪರ್ಧೆ

Cong finalises around 100 candidates for Karnataka, some MLAs to be dropped
Photo Credit : IANS

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ಸಂಜೆ ಸಭೆ ನಡೆಸಿ ಪ್ರತಿ ವಿಧಾನಸಭಾ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಿತು. ಶೀಘ್ರದಲ್ಲೇ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಡಿ.ಕೆ. ಶಿವಕುಮಾರ್‌ ಪಕ್ಷ ಯಾವುದೇ ಮೈತ್ರಿ ಮುಂದಾಗುವುದಿಲ್ಲ ಎಂದು ತಿಳಿಸಿದರು. ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗದಿರಬಹುದು ಎಂದು ಮೂಲಗಳು ತಿಳಿಸಿವೆ. 224 ಸದಸ್ಯ ಬಲದ ಸದನದಲ್ಲಿ ಕಾಂಗ್ರೆಸ್ ಪ್ರಸ್ತುತ 68 ಶಾಸಕರನ್ನು ಹೊಂದಿದ್ದು, ರಾಜ್ಯ ಸ್ಕ್ರೀನಿಂಗ್ ಕಮಿಟಿ ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಸಿದ್ಧಪಡಿಸಿದೆ. 100ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದೇ ಹೆಸರು ಹಾಗೂ ಇತರೆ ಕ್ಷೇತ್ರಗಳಿಗೆ ಎರಡು ಅಥವಾ ಮೂರು ಹೆಸರುಗಳನ್ನು ಸಮಿತಿ ಶಿಫಾರಸು ಮಾಡಿದೆ. ಎಸ್‌ಸಿ/ಎಸ್‌ಟಿ ಮತ್ತು ಇತರೆ ಹಿಂದುಳಿದ ವರ್ಗದ ಉಪಜಾತಿಗಳಿಗೂ ಪಕ್ಷ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ರಾಜ್ಯ ನಾಯಕರು ಒತ್ತಾಯಿಸಿದ್ದಾರೆ. 224 ಸ್ಥಾನಗಳಿಗೆ ಕಾಂಗ್ರೆಸ್‌ನಿಂದ 1,300ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತಿರುವ ರಾಜ್ಯದ ಜನತೆ ಬದಲಾವಣೆಗೆ ಮನಸ್ಸು ಮಾಡಿದ್ದಾರೆ ಎಂದು ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರಣತಂತ್ರ ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬೊಮ್ಮಾಯಿ ವಿರುದ್ಧ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಕಣಕ್ಕಿಳಿಸುವ ಕುರಿತು ಪಕ್ಷ ತೀರ್ಮಾನ ಕೈಗೊಳ್ಳಲಿದೆ.
ಕುಲಕರ್ಣಿ ಲಿಂಗಾಯತ ಸಮುದಾಯದ ಪಂಚಮಸಾಲಿ ಉಪಜಾತಿಗೆ ಸೇರಿದರೆ ಬೊಮ್ಮಾಯಿ ಸಾದರ್ ಉಪಜಾತಿಗೆ ಸೇರಿದವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು