Bengaluru 29°C
Ad

ಗಾಜಾ ನಿರಾಶ್ರಿತ ಶಿಬಿರದ ಮೇಲೆ ಮುಂದುವರಿದ ಇಸ್ರೇಲ್ ದಾಳಿ: 210 ಜನ ಸಾವು

ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಮತ್ತೆ ತನ್ನ ದಾಳಿ ಮುಂದುವರೆಸಿದ್ದು, ಕನಿಷ್ಠ 210 ಜನ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಟೆಲ್ ಅವಿವ್: ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಮತ್ತೆ ತನ್ನ ದಾಳಿ ಮುಂದುವರೆಸಿದ್ದು, ಕನಿಷ್ಠ 210 ಜನ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ನುಸಿರಾತ್‍ನಲ್ಲಿ ನಾಲ್ವರು ಇಸ್ರೇಲಿ ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ನೋವಾ ಅರ್ಗಾಮಣಿ (26) ಅಲ್ಮೊಗ್ ಮೀರ್ ಜಾನ್ (22) ಆಂಡ್ರೆ ಕೊಜ್ಲೋವ್ (27) ಮತ್ತು ಶ್ಲೋಮಿ ಝಿವ್ (41) ಇಸ್ರೇಲ್ ಸೇನೆ ಹೇಳಿಕೊಂಡಿದೆ.

ಇಸ್ರೇಲ್ ದಾಳಿಗೆ ಪ್ರತಿಕ್ರಿಯಿಸಿರುವ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್, ನಾವು ಹೋರಾಟವನ್ನು ಮುಂದುವರೆಸುತ್ತೇವೆ. ನಮ್ಮ ಜನ ಶರಣಾಗುವುದಿಲ್ಲ ಮತ್ತು ಶತ್ರುಗಳಿಂದ ನಮ್ಮ ಹಕ್ಕುಗಳನ್ನು ರಕ್ಷಿಸಲು ಪ್ರತಿರೋಧ ಮುಂದುವರಿಯುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಿರಂತರ ಯುದ್ಧದಿಂದಾಗಿ ಸಾವು ನೋವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಹಾಯಕ್ಕಾಗಿ ಅಂತರರಾಷ್ಟ್ರೀಯ ಸಹಾಯ ಸಂಸ್ಥೆಗಳಿಗೆ ಹಮಾಸ್ ಮನವಿ ಮಾಡಿದೆ.

Ad
Ad
Nk Channel Final 21 09 2023
Ad