Categories: ವಿದೇಶ

ನೈರುತ್ಯ ಗ್ರೀಸ್‌ನಲ್ಲಿ ವಲಸಿಗರ ದೋಣಿ ಮುಳುಗಿ 59 ಮಂದಿ ಸಾವು

ಅಥೆನ್ಸ್: ನೈರುತ್ಯ ಗ್ರೀಸ್‌ನಲ್ಲಿ ನಿರಾಶ್ರಿತರು ಮತ್ತು ವಲಸಿಗರನ್ನು ಸಾಗಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 59 ಮಂದಿ ಸಾವನಪ್ಪಿದ್ದಾರೆ ಎಂದು ಗ್ರೀಕ್ ರಾಷ್ಟ್ರೀಯ ಪ್ರಸಾರಕ ಇಆರ್‌ಟಿ ವರದಿ ಮಾಡಿದೆ.

ಒಟ್ಟು 104 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಇನ್ನೂ ನಾಪತ್ತೆಯಾದವರ ಪತ್ತೆಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಬುಧವಾರ ರಾತ್ರಿ ಸಮಯದಲ್ಲಿ ಪೈಲೋಸ್ ಪಟ್ಟಣದ ಕರಾವಳಿಯಿಂದ 47 ನಾಟಿಕಲ್ ಮೈಲಿ ದೂರದಲ್ಲಿರುವ ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೀನುಗಾರಿಕಾ ದೋಣಿ ಲಿಬಿಯಾದ ಟೊಬ್ರೂಕ್‌ನಿಂದ ಹೊರಟು ಇಟಲಿಗೆ ಹೋಗುತ್ತಿತ್ತು ಎಂದು ಬದುಕುಳಿದವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. 2015 ರಿಂದ ಗ್ರೀಸ್ ನಿರಾಶ್ರಿತರ ಮತ್ತು ವಲಸಿಗರ ಕೇಂದ್ರವಾಗಿ ಪರಿವರ್ತನೆಯಾಗುತ್ತಿದೆ. ಅಕ್ರಮ ವಲಸಿಗರು ಗ್ರೀಸ್‌ಗೆ ತೆರಳುವ ವೇಳೆ
ಹಲವು ಬಾರಿ ಅವಘಡಗಳು ಸಂಭವಿಸಿವೆ.

Umesha HS

Recent Posts

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

9 mins ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

23 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

30 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

34 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

45 mins ago