News Karnataka Kannada
Wednesday, April 24 2024
Cricket
ದೇಶ

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ: 24 ಗಂಟೆಯಲ್ಲಿ 2,252 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

covid case increased
Photo Credit :

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 4ನೇ ಅಲೆ ಆತಂಕ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ 2,252 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 32 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 523654 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 16279 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2252 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42525563 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 1,88,19,40,971 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 21,97,082 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,05,065 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು