News Karnataka Kannada
Sunday, April 21 2024
Cricket
ದೇಶ

ದೇಶದಲ್ಲಿಂದು 8,865 ಹೊಸ ಕೇಸ್ ಪತ್ತೆ

Ita Covid19 Mng 06082021
Photo Credit :

ನವದೆಹಲಿ: ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,865 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,30,793ಕ್ಕೆ ತಲುಪಿದೆ

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,56,401ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,63,852ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 11,971 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,38,61,756ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,07,617 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 62,57,74,159 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,12,34,30,478 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು