News Karnataka Kannada
Sunday, April 14 2024
Cricket
ದೇಶ

ಸಬರಮತಿ ಆಶ್ರಮದಲ್ಲಿ ಸಾಂಪ್ರದಾಯಿಕ ಚರಕವನ್ನು ತಿರುಗಿಸಿ, ಖುಷಿಪಟ್ಟ ಬ್ರಿಟನ್ ಪ್ರಧಾನಿ

Britanbritain
Photo Credit :

ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಈಗಾಗಲೇ ಗುಜರಾತ್​ನ ಅಹಮದಾಬಾದ್​​ಗೆ ಬಂದಿಳಿದಿದ್ದು, ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮದಲ್ಲಿ ಸಾಂಪ್ರದಾಯಿಕ ಚರಕವನ್ನು ತಿರುಗಿಸಿ, ಖುಷಿಪಟ್ಟಿದ್ದಾರೆ.

ಈ ವೇಳೆ ಸಂದರ್ಶಕರ ಪುಸ್ತಕದಲ್ಲಿ ಮಹಾತ್ಮ ಗಾಂಧಿ ಅವರನ್ನು ಸ್ಮರಿಸಿ ತಮ್ಮ ಅಭಿಪ್ರಾಯ ಬರೆದಿದ್ದಾರೆ. ‘ಅಸಾಧಾರಣ ವ್ಯಕ್ತಿಯ ಆಶ್ರಮಕ್ಕೆ ಬಂದಿರುವುದು ಬಹಳ ಖುಷಿಯ ವಿಚಾರ’ ಎಂದಿದ್ದಾರೆ.

ಇದಾದ ಬಳಿಕ ವಡೋದರಾದ ಬೃಹತ್ ಜೆಸಿಬಿ ಯಂತ್ರ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ್ದು, ಹೊಸ ಫ್ಲ್ಯಾಟ್​ಗೆ ಚಾಲನೆ ನೀಡಿದರು. ಇದರ ಬೆನ್ನಲ್ಲೇ ಕೈಗಾರಿಕೋದ್ಯಮಿ ಗೌತಮ್ ಅದಾನಿ ಜೊತೆ ಮಹತ್ವದ ಮಾತುಕತೆ ನಡೆಸಿದರು.

ಬ್ರಿಟಿಷ್ ಪ್ರಧಾನಿ ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ವಾಣಿಜ್ಯ ಒಪ್ಪಂದಗಳ ರಾಫ್ಟ್ ಅನ್ನು ಘೋಷಿಸುತ್ತಾರೆ ಮತ್ತು ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳಲ್ಲಿ ‘ಹೊಸ ಯುಗ’ವನ್ನು ಶ್ಲಾಘಿಸುತ್ತಾರೆ ಎಂದು ಯುಕೆ ಹೈ ಕಮಿಷನ್ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು