ದೆಹಲಿ : ಭಾರತದಿಂದ ಪ್ರಯಾಣಿಸುವ ಮತ್ತು ಆಗಮಿಸುವ ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ನಾಗರೀಕ ವಿಮಾನಯಾನ ಸಂಸ್ಥೆ ತಿಳಿಸಿದೆ.
ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವು ಆಗಸ್ಟ್ 31ರಂದು ಕೊನೆಗೊಳ್ಳಬೇಕಿತ್ತು. ಆದರೆ ಕೊರೋನಾ ಮೂರನೇ ಅಲೆಯ ಹಿನ್ನೆಲೆ ಸೆ.30ರವರೆಗೆ ವಿಸ್ತರಿಸಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ 2020ರ ಮಾರ್ಚ್ 23 ರಿಂದ ಭಾರತದಿಂದ ಹೊರಡುವ ಮತ್ತು ಆಗಮಿಸುವಂತ ಎಲ್ಲಾ ನಿಗದಿತ ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿಷೇಧಿಸಲಾಗಿತ್ತು.