News Karnataka Kannada
Thursday, May 02 2024
ಪಂಜಾಬ್

ಅಜೀತ್ ದೋವಲ್ ರನ್ನು ಭೇಟಿ ಮಾಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್

Amrindar Singh
Photo Credit :

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜೀತ್ ದೋವಲ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ದೆಹಲಿಯ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ಚರ್ಚೆ ನಡೆಸಿ ಮೂರು ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂತೆಗೆದುಕೊಂಡು ಬಿಕ್ಕಟ್ಟನ್ನು ತಕ್ಷಣ ಬಗೆಹರಿಸುವಂತೆ ಕೇಳಿಕೊಂಡಿದ್ದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಅವರು ಹಠಾತ್ತನೆ ರಾಜೀನಾಮೆ ನೀಡಿರುವ ಸಂದರ್ಭದಲ್ಲಿ ಕ್ಯಾ. ಅಮರಿಂದರ್ ಸಿಂಗ್ ಅವರ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ಸೆ.18ರಂದು ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ ಕ್ಯಾ.ಅಮರಿಂದರ್ ಸಿಂಗ್ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿ ಕಾಂಗ್ರೆಸ್ ನಾಯಕತ್ವದಿಂದ ನಿರಾಸೆಗೊಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದರು. ನವಜೋತ್ ಸಿಂಗ್ ಸಿಧು ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿದ್ದ ಅವರು, ಸಿಧು ಅವರು ಸ್ಥಿರ ಮನಸ್ಸಿನ ವ್ಯಕ್ತಿಯಲ್ಲ ಎಂದು ಸಹ ಟೀಕಿಸಿದ್ದರು.

ಮುಂಬರುವ ಪಂಜಾಬ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಠಿಣ ಸ್ಪರ್ಧೆ ನೀಡಲು ಮುಂದಾಗಿದ್ದು, ಕಾಂಗ್ರೆಸ್ ನಲ್ಲಿನ ಈ ಬೆಳವಣಿಗೆ, ಕ್ಯಾ.ಅಮರಿಂದರ್ ಸಿಂಗ್ ಅವರ ಭೇಟಿ ಹಲವು ಚರ್ಚೆ, ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು