ಮುಂಬೈ : ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ನಡೆದ ಭೀಕರ ಅತ್ಯಾಚಾರಕ್ಕೊಳಗಾದ 34 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಘಾಟ್ಕೋಪರ್ನ ರಾಜಾವಾಢೀ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುಕೃತ್ಯ ಶುಕ್ರವಾರ ಬೆಳಗ್ಗೆ ಮುಂಬೈನ ಸಾಕಿ ನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ನಡೆದಿದೆ.
ಆರೋಪಿ ಮೊದಲು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ಹಾಕಿ ಹಾಕಿದ್ದಾನೆ. ಬಳಿಕ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಈ ಅತ್ಯಾಚಾರ ಪ್ರಕರಣವೂ ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದಷ್ಟೇ ಘನಘೋರವಾಗಿದ್ದು, ಈ ಮಹಿಳೆಯನ್ನು ಮುಂಬೈನ ನಿರ್ಭಯಾ ಎಂದೇ ಕರೆಯಲಾಗುತ್ತಿದೆ.