ಅಧಿಕಾರಿಗಳು ವಿದೇಶಿ ಗಣ್ಯರ ಉಡುಗೊರೆಗಳನ್ನು ಉಳಿಸಿಕೊಳ್ಳಬಹುದು : ಕೇಂದ್ರ ಸರ್ಕಾರ

ನವದೆಹಲಿ: ಐಎಎಸ್, ಐಪಿಎಸ್ ಮತ್ತು ಐಎಫ್‌ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿದ್ದಾಗ ವಿದೇಶಿ ಗಣ್ಯರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.

ಈ ಸಂಬಂಧ 50 ವರ್ಷಗಳ ಹಳೆಯ ನಿಯಮಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಗಳು ಈ ಅಧಿಕಾರಿಗಳಿಗೆ ತಮ್ಮ ಹತ್ತಿರದ ಸಂಬಂಧಿಕರಿಂದ ಅಥವಾ ಅಧಿಕೃತ ವ್ಯವಹಾರಗಳಿಲ್ಲದ ವೈಯಕ್ತಿಕ ಸ್ನೇಹಿತರಿಂದ ಮದುವೆ, ವಾರ್ಷಿಕೋತ್ಸವಗಳು ಮತ್ತು ಇತರೆ ಧಾರ್ಮಿಕ ಕಾರ್ಯಗಳಂತಹ ಸಂದರ್ಭಗಳಲ್ಲಿ ಉಡುಗೊರೆಗಳನ್ನು ಸ್ವೀಕರಿಸಲು ಅವಕಾಶ ಇದೆ.

ಆದರೆ ಅಂತಹ ಉಡುಗೊರೆಯ ಮೌಲ್ಯವು 25,000 ರೂ.ಗಳನ್ನು ಮೀರಿದರೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ನಿಯಮಗಳು ಹೇಳುತ್ತವೆ.

ಸಿಬ್ಬಂದಿ ಸಚಿವಾಲಯವು ಈಗ ಈ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಅಖಿಲ ಭಾರತ ಸೇವೆಗಳ(ನಡವಳಿಕೆ) ನಿಯಮಗಳು, 1968 ರ ಸೆಕ್ಷನ್ 11 ರ ಅಡಿಯಲ್ಲಿ ಹೊಸ ಉಪ ನಿಯಮವನ್ನು ಸೇರಿಸಿದೆ.

ಹೊಸ ಉಪ ನಿಯಮದ ಪ್ರಕಾರ, ಐಎಎಸ್, ಐಪಿಎಸ್ ಮತ್ತು ಐಎಫ್ ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿರುವುದು ಅಥವಾ ಇಲ್ಲದಿದ್ದರೆ ವಿದೇಶಿ ಗಣ್ಯರಿಂದ ಉಡುಗೊರೆಗಳನ್ನು ಸ್ವೀಕರಿಸಬಹುದು ಮತ್ತು ಅವುಗಳನ್ನು ಉಳಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ .

Raksha Deshpande

Recent Posts

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

12 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

30 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

57 mins ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 hour ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 hours ago