News Karnataka Kannada
Saturday, April 27 2024
ದೇಶ

ಅಫಘಾನಿಸ್ತಾನ : ಜಲಾಲಾಬಾದ್ ನಲ್ಲಿ ಸ್ಫೋಟ, ಇಬ್ಬರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Blast 05092021
Photo Credit :

ಅಫಘಾನಿಸ್ತಾನ : ಅಘಘಾನಿಸ್ತಾನದ ಜಲಾಲಾಬಾದ್ ನಲ್ಲಿ ನಿನ್ನೆ ನಡೆದ ಮೂರು ಸ್ಫೋಟಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಮೆರಿಕ ಸೇನೆಯು ತವರಿಗೆ ತೆರಳಿದ ನಂತರ ನಡೆದ ಮೊದಲು ದಾಳಿ ಇದಾಗಿದೆ. ನಡೆದ ಮೂರು ಸ್ಫೋಟಗಳ ಪೈಕಿ ಒಂದನ್ನು ತಾಲಿಬಾನ್‌ ಸೈನಿಕರ ವಾಹನವನ್ನು ಗುರಿ ಮಾಡಿಕೊಂಡು ನಡೆಸಲಾಗಿತ್ತು ಎನ್ನಲಾಗಿದೆ.

ಆದರೆ ಈ ದಾಳಿಯ ಹೊಣೆಯನ್ನು ಇದುವರೆಗೂ ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ. ಇಸ್ಲಾಮಿಕ್ ಸ್ಟೇಟ್‌ನ ಅಫ್ಘನ್ ಘಟಕವು ತಾಲಿಬಾನ್ ಅನ್ನು ಗುರಿ ಮಾಡಿಕೊಂಡು ದಾಳಿ ನಡೆಸಿದೆ ಎನ್ನಲಾಗಿದೆ.

‘ಮೂರು ಸ್ಫೋಟಗಳಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಜಲಾಲಾಬಾದ್‌ನಲ್ಲಿ ಗಸ್ತು ತಿರುಗುತ್ತಿದ್ದ ತಾಲಿಬಾನ್‌ನ ಸೈನಿಕರ ವಾಹನವನ್ನು ಗುರಿ ಮಾಡಿಕೊಂಡು ದಾಳಿ ನಡೆಸಿರುವ ಸಾಧ್ಯತೆ ಇದೆ’ ಎಂದು ತಾಲಿಬಾನ್ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು