Categories: ದೇಶ

ಅಫ್ಘಾನಿಸ್ಥಾನದಿಂದ ಭಾರತದ ರಾಜತಾಂತ್ರಿಕ ಸಿಬ್ಬಂದಿ ಸುರಕ್ಷಿತವಾಗಿ ಸ್ವದೇಶಕ್ಕೆ

ನವದೆಹಲಿ, : ಆಫ್ಗಾನಿಸ್ತಾನದ ಅಧಿಕಾರ ತಾಲಿಬಾನ್ ವಶವಾದ ಬೆನ್ನಲ್ಲೇ ರಾಜಧಾನಿ ಕಾಬೂಲ್​ನಲ್ಲಿದ್ದ ಭಾರತದ ರಾಜತಾಂತ್ರಿಕ ಕಚೇರಿಯ ಎಲ್ಲಾ ಸಿಬ್ಬಂದಿಯನ್ನ ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ರಾಯಭಾರ ಕಚೇರಿಯ 130 ಸಿಬ್ಬಂದಿ ಹಾಗೂ ಕೆಲ ಮುಖ್ಯ ದಾಖಲೆಗಳನ್ನ ಹೊತ್ತು ಕಾಬೂಲ್​ನ ಹಮೀದ್ ಕರ್ಜೈ ಇಂಟರ್​ನ್ಯಾಷನಲ್ ಏರ್​ಪೋರ್ಟ್​ನಿಂದ ಭಾರತದ ವಾಯುಪಡೆ ವಿಮಾನ ಮಂಗಳವಾರ ಬೆಳಗ್ಗೆ ಹೊರಟಿದೆ. ಸಂಜೆಯ ವೇಳೆಗೆ ದೆಹಲಿಯಿಂದ 39 ಕಿಮೀ ದೂರದಲ್ಲಿರುವ ಹಿಂದೋನ್ ವಿಮಾನ ನಿಲ್ದಾಣಕ್ಕೆ ಅದು ಬಂದು ಇಳಿಯಲಿದೆ ಎಂದು ಒಂದು ಮೂಲದಿಂದ ಮಾಹಿತಿ ತಿಳಿದುಬಂದಿದೆ. ಇದೇ ವೇಳೆ, ಭಾರತೀಯ ವಾಯುಪಡೆಯ ಮತ್ತೊಂದು ವಿಮಾನವು ಇನ್ನಷ್ಟು ಭಾರತೀಯರನ್ನ ಹೊತ್ತು ದೆಹಲಿಯತ್ತ ಆಗಮಿಸಿದೆ ಎಂದು ಹೇಳಲಾಗಿದೆ.
ಇದೇ ವೇಳೆ, ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ ತಿಳಿಸಿದ್ದಾರೆ. “ಕಾಬೂಲ್​ನಲ್ಲಿ ಕಳೆದ ಕೆಲ ದಿನಗಳಲ್ಲಿ ಭದ್ರತಾ ಪರಿಸ್ಥಿತಿ ಬಿಗಡಾಯಿಸಿದೆ. ನಾವು ಈಗ ಮಾತನಾಡುತ್ತಿರುವಾಗಲೇ ಪರಿಸ್ಥಿತಿ ಬಹಳ ವೇಗವಾಗಿ ಬದಲಾಗುತ್ತಲೇ ಇದೆ. ಆಫ್ಘಾನಿಸ್ತಾನದಲ್ಲಿನ ಎಲ್ಲಾ ಬೆಳವಣಿಗೆಗಳನ್ನ ಭಾರತ ಸರ್ಕಾರ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ…. ಆಫ್ಘಾನಿಸ್ತಾನದಲ್ಲಿರುವ ಸಿಖ್ ಮತ್ತು ಭಾರತೀಯ ಸಮುದಾಯಗಳ ಪ್ರತಿನಿಧಿಗಳೊಂದಿಗೆ ನಾವು ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಆಫ್ಘಾನಿಸ್ತಾನವನ್ನು ಬಿಟ್ಟು ಭಾರತಕ್ಕೆ ಬರಲು ಬಯಸುವ ಜನರಿಗೆ ನಾವು ವ್ಯವಸ್ಥೆ ಮಾಡುತ್ತೇವೆ” ಎಂದು ಅರಿಂದಮ್ ಬಾಗ್ಚಿ ಹೇಳಿದ್ದಾರೆ.

Indresh KC

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

18 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

37 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

38 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

40 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

53 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago