News Karnataka Kannada
Tuesday, April 30 2024
ಮುಂಬೈ

ಅಮರಾವತಿ ದೋಣಿ ದುರಂತ, ಸಾವಿನ ಸಂಖ್ಯೆ 10ಕ್ಕೆ ಏರಿಕೆ

Boat 16082021
Photo Credit :

ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಇತ್ತೀಚಿಗೆ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ 13 ಮಂದಿಯಿಂದ ದೋಣಿಯೊಂದು ಮುಳುಗಿತ್ತು. ಘಟನೆ ವೇಳೆ ಇಬ್ಬರು ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರು.

ಘಟನೆ ಬಳಿಕ ಪೋಲಿಸ್ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡಗಳು ಕಾರ್ಯಾಚರಣೆ ನಡೆಸಿ ಮೂರು ಮೃತದೇಹಗಳನ್ನು ಹೊರತೆಗೆದಿದ್ದರು. ಉಳಿದವರಿಗಾಗಿ ಕಾರ್ಯಾಚರಣೆ ಮುಂದುವರೆದಿತ್ತು. ಇದರಂತೆ ಇಂದು  7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, 11 ವರ್ಷದ ಬಾಲಕಿ ಇನ್ನೂ ಪತ್ತೆಯಾಗಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು