ನವದೆಹಲಿ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಿವಾಹಿತ ಮಹಿಳೆಯರಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅನುಮತಿ ನೀಡಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ.
ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶಕ್ಕೆ ಅನುಸಾರವಾಗಿ, ಯುಪಿಎಸ್ ಸಿ ಪರೀಕ್ಷೆಗಾಗಿ upsconline.nic.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲು ನಿರ್ಧರಿಸಿದೆ. ರಾಷ್ಟ್ರೀಯತೆ, ವಯಸ್ಸು, ಶೈಕ್ಷಣಿಕ ಅರ್ಹತೆ ಇತ್ಯಾದಿಗಳ ವಿಷಯದಲ್ಲಿ ಅರ್ಹರಾಗಿರುವ “ಅವಿವಾಹಿತ ಮಹಿಳಾ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು” ಎಂದು ಪ್ರಕಟಣೆ ತಿಳಿಸಿದೆ.
ದೈಹಿಕ ಮಾನದಂಡಗಳು ಮತ್ತು ಮಹಿಳಾ ಅಭ್ಯರ್ಥಿಗಳ ಖಾಲಿ ಹುದ್ದೆಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯದಿಂದ ಮಾಹಿತಿ ಪಡೆದ ನಂತರ ತಿಳಿಸಲಾಗುವುದು ಎಂದು ಯುಪಿಎಸ್ ಸಿ ಹೇಳಿದೆ.