News Karnataka Kannada
Sunday, May 12 2024
ದೇಶ

ಆಗಸ್ಟ್ 14 ದೇಶ ವಿಭಜನೆಯ ಕರಾಳ ದಿನ : ಪ್ರಧಾನಿ ಮೋದಿ

Modi Main Newsk 9189649604
Photo Credit :
ನವದೆಹಲಿ : ಇನ್ನು ಮುಂದೆ ಆಗಸ್ಟ್​ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.
 ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ದೇಶ ವಿಭಜನೆಯ ನೋವನ್ನು ಎಂದಿಗೂ ಮರೆಯಲಾಗದು. ದ್ವೇಷ ಮತ್ತು ಹಿಂಸಾಚಾರದಿಂದಾಗಿ ನಮ್ಮ ಲಕ್ಷಾಂತರ ಸಹೋದರ ಸಹೋದರಿಯರು ಸ್ಥಳಾಂತರಗೊಂಡಿದ್ದರು. ಅನೇಕರು ಪ್ರಾಣ ಕಳೆದುಕೊಂಡಿದ್ದರು. ನಮ್ಮ ಜನರು ಪಟ್ಟ ಪಾಡುಗಳು ಮತ್ತು ತ್ಯಾಗದ ನೆನಪಿಗಾಗಿ ಆಗಸ್ಟ್ 14 ಅನ್ನು ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಪರಿಗಣಿಸಲಾಗುವುದು’ ಎಂದು ಹೇಳಿದ್ದಾರೆ.
‘ವಿಭಜನೆಯ ಕರಾಳ ನೆನಪಿನ ದಿನ’ವು ಸಾಮಾಜಿಕ ವಿಭಜನೆ, ಅಸಾಮರಸ್ಯದ ವಿಷವನ್ನು ತೆಗೆದುಹಾಕುವ ಅಗತ್ಯವನ್ನು ನೆನಪಿಸುತ್ತದೆ. ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಆಶಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು