ಆಫ್ಘನಿಸ್ಥಾನ ಈಗಿನ ಪರಿಸ್ಥಿತಿ ನೋಡಿ ಸಿಎಎ ಯಾಕೆ ಅವಶ್ಯ ಎಂದು ತಿಳಿಯ ಬೇಕಿದೆ : ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ: ತಾಲಿಬಾನ್ ಅಟ್ಟಹಾಸದಿಂದ ನಲಗುತ್ತಿರುವ  ಅಫ್ಘಾನಿಸ್ತಾನದಿಂದ 168 ಭಾರತೀಯರನ್ನು ಸ್ಥಳಾ0ತರಿಸಿದ ಬೆನ್ನಲ್ಲೇ  ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿಎಎ ಬಗ್ಗೆ ಮಾತನಾಡಿದ್ದಾರೆ.
ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಏಕೆ ಅಗತ್ಯ ಎಂಬುದಕ್ಕೆ ನೆರೆ ರಾಷ್ಟ್ರ ಅಫ್ಘಾನಿಸ್ತಾನದಲ್ಲಿನ ಅಸ್ಥಿರ ಪರಿಸ್ಥಿತಿ ಕಾರಣ ಹೇಳುತ್ತದೆ ಎಂದು ಲೇಖನವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.
“ಅಸ್ಥಿರತೆಗೊಳಗಾಗಿರುವ ನೆರೆಯ ಅಫ್ಘಾನಿಸ್ತಾನದಲ್ಲಿ ಸಿಖ್ಖರು ಹಾಗು ಹಿಂದೂಗಳು ಎದುರಿಸುವ ಕರಾಳ ಪರಿಸ್ಥಿತಿ ಸಿಎಎ ಏಕೆ ಬೇಕು ಎಂಬುದಕ್ಕೆ ನಿಖರವಾದ ಉತ್ತರ ನೀಡುತ್ತದೆ” ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ಕಳೆದ ವಾರ ಅಫ್ಘಾನಿಸ್ತಾನ ತಾಲೀಬಾನ್ ವಶವಾದ ನಂತರಲ್ಲಿ ಅಲ್ಲಿನ ಬಹುತೇಕ ಮಂದಿ ದೇಶ ತೊರೆಯುತ್ತಿದ್ದಾರೆ. ಅಫ್ಘಾನಿಸ್ತಾನದಲ್ಲಿ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಬದ್ಧವಾಗಿದೆ ಎಂದು ಎಂಇಎ ಹೇಳಿದೆ.
ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಲ್ಲಿ ಅಲ್ಪಸಂಖ್ಯಾತರೆಂಬ ಕಾರಣಕ್ಕೆ ಧಾರ್ಮಿಕ ದೌರ್ಜನ್ಯ, ಕಿರುಕುಳಕ್ಕೆ ಒಳಗಾಗಿರುವ ಹಿಂದೂಗಳು, ಸಿಖ್, ಜೈನ, ಬೌದ್ಧ, ಪಾರ್ಸಿ, ಕ್ರೈಸ್ತ ಸಮುದಾಯದವರಿಗೆ ಭಾರತದಲ್ಲಿ ಪೌರತ್ವ ನೀಡುವುದು ಸಿಎಎಯ ಉದ್ದೇಶವಾಗಿದೆ. ಈ ಕಾಯ್ದೆಗೆ ವಿಪಕ್ಷಗಳು ಹಾಗೂ ಹಲವು ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದವು.
Raksha Deshpande

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

4 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

19 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

23 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

46 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago