ಕ್ಯಾನ್ಬೆರಾ: ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ಅಮೆರಿಕದ ಯುದ್ಧ ವಿಮಾನವೊಂದು ಪತನಗೊಂಡ ಪರಿಣಾಮ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.
ವಿಮಾನ ಉತ್ತರ ಆಸ್ಟ್ರೇಲಿಯಾದ ಡಾರ್ವಿನ್ ಬಳಿಯ ದ್ವೀಪದಲ್ಲಿ ಪತನಗೊಂಡಿದೆ. ಗಾಯಗೊಂಡ ನಾಲ್ವರು ಸಿಬ್ಬಂದಿಯಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಪತನಗೊಂಡ ಸ್ಥಳದಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ಬೀಡು ಬಿಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.