ಪಣಜಿ: ಸರ್ಕಾರಿ ಆಸ್ಪತ್ರೆಯಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಾರ್ಡ್ ಬಾಯ್ ನ್ನು ಬಂಧಿಸಲಾಗಿದೆ.
ಸೆ.23 ಹಾಗೂ 25 ರಂದು ಇಬ್ಬರು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡಿದ್ದ. ಇಬ್ಬರು ಅಪ್ರಾಪ್ತ ಬಾಲಕಿಯರು ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಹಿನ್ನೆಲೆಯಲ್ಲಿ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು.
ವಾರ್ಡ್ ಬಾಯ್ ಕಳೆದ ಕೆಲವು ದಿನಗಳಿಂದ ಲಿಫ್ಟ್ ನಲ್ಲಿ ಈ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸುವುದು ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸ್ ಅಧಿಕಾರಿಗಳು, ಬಾಲಕಿಯರ ಕುಟುಂಬ ಸದಸ್ಯರ ದೂರನ್ನು ಉಲ್ಲೇಖಿಸಿ ಹೇಳಿದ್ದಾರೆ.
ದೂರಿನ ಆಧಾರದಲ್ಲಿ 47 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು ಪೋಸ್ಕೋ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.