News Karnataka Kannada
Saturday, May 04 2024
ದೇಶ

ಇಂದು ಜವಾಹರಲಾಲ್ ನೆಹರು ಜನ್ಮದಿನ: ಪ್ರಧಾನಿ ಮೋದಿ , ಸಿಎಂ ಸೇರಿ ಗಣ್ಯರಿಂದ ಸ್ಮರಣೆ

Neharu Children
Photo Credit :

ಇಂದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನ. ಇವರ ಹುಟ್ಟುಹಬ್ಬವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಜವಾಹರಲಾಲ್‌ ನೆಹರುರನ್ನು ನೆನೆದಿದ್ದು, “ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು” ಎಂದು ಟ್ವೀಟ್‌ ಮಾಡಿದ್ದಾರೆ.

 

ಹಾಗೆಯೇ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್‌ ಮಾಡಿದ್ದು,” ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು” ಎಂದಿದ್ದಾರೆ.

“ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ” ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

“ನಾಡಿನ ಎಲ್ಲಾ ಪ್ರೀತಿಯ ಮಕ್ಕಳಿಗೆ ‘ಮಕ್ಕಳ ದಿನಾಚರಣೆ’ಯ ಶುಭಾಶಯಗಳು. ಶಿಕ್ಷಣ, ಉತ್ತಮ ನಡೆ, ನುಡಿ, ಸಚ್ಚಾರಿತ್ರ್ಯದೊಂದಿಗೆ ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ. ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಜಯಂತಿಯ ಸ್ಮರಣೆಗಳು” ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು