News Karnataka Kannada
Friday, May 03 2024
ದೇಶ

ಇನ್ಮುಂದೆ ನ್ಯಾಯಾಲಯದಲ್ಲಿ ಹೋರಾಟ ಮುಂದುವರೆಯಲಿದೆ: ಕುಸ್ತಿಪಟುಗಳ ಎಚ್ಚರಿಕೆ

Wrestlers
Photo Credit : Twitter

ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಇಂದು ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ ನ್ಯಾಯ ಸಿಗುವವರೆಗೂ ನ್ಯಾಯಾಲಯದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಕುಸ್ತಿಪಟುಗಳು, ಡಬ್ಲ್ಯುಎಫ್ಐನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11 ರ ಚುನಾವಣೆಗೆ ಸರ್ಕಾರ ನೀಡಿರುವ ಭರವಸೆಗಾಗಿ ಕಾಯುತ್ತೇವೆ. ಅಲ್ಲದೇ ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ವಿರಾಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಏಷ್ಯನ್ ಗೇಮ್ಸ್ಗೆ ಮುನ್ನ ತಯಾರಿಗೆ ವಿನಾಯಿತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ವಿನೇಶ್ ಫೋಗಟ್ ಅವರು ಪತ್ರವೊಂದರ ಚಿತ್ರವನ್ನು ಟ್ವಿಟರ್ನಲ್ಲಿ ಹಾಕಿದ್ದಾರೆ. ಈ ಮೂಲಕ ಬಿಜೆಪಿ ಮುಖಂಡ ಹಾಗೂ ಮಾಜಿ ಕುಸ್ತಿಪಟು ಯೋಗೇಶ್ವರ್ ದತ್ ಕ್ರೀಡಾ ಸಚಿವಾಲಯದ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು