ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 10,853 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,853 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 526 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
12,432 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.ದೇಶದಲ್ಲಿ ಸದ್ಯ 1,44,845 ಕೊರೊನಾ ಸಕ್ರಿಯ ಕೇಸ್ ಗಳಿದ್ದು, ಈವರೆಗೆ ಒಟ್ಟು ಒಟ್ಟು 1,08,21,66,365 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.