Categories: ದೇಶ

ಈ ವರ್ಷ 96 ಉಗ್ರರ ಹತ್ಯೆ ಮಾಡಿದ ಭದ್ರತಾ ಪಡೆಗಳು

 

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ತಿಂಗಳಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಈ ವರ್ಷದ ಜೂನ್ 1 ರಿಂದ ಇಲ್ಲಿಯವರೆಗೆ ಒಟ್ಟು 51 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಗತ್ಯತೆಯ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋವಿಡ್-19​ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಕಡಿಮೆಯಾಗಿತ್ತು. ಆದರೆ ಜೂನ್ ಮೊದಲ ವಾರದಿಂದ ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಿದ ನಂತರ ಮತ್ತೆ ಉಗ್ರರು ತಮ್ಮ ಚಾಳಿ ಮುಂದುವರೆಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.ಇನ್ನು 52 ದಿನಗಳಲ್ಲಿ ಅಂದರೆ ಜೂನ್ 1 ರಿಂದ ಜುಲೈ 22 ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 34 ಭಯೋತ್ಪಾದನಾ ದಾಳಿಗಳು ನಡೆದಿವೆ. ಭದ್ರತಾ ಪಡೆಗಳು ಅಗತ್ಯದ ಆಧಾರದ ಮೇಲೆ ಕಾರ್ಯಾಚರಣೆ ನಡೆಸುತ್ತಿವೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅಗತ್ಯ ಮತ್ತು ತುರ್ತು ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಯಿತು. ಆದರೆ, ಕಾರ್ಯಾಚರಣೆಗಳು ಸ್ಥಗಿತಗೊಂಡಿರಲಿಲ್ಲ ಎಂದರು.ಈ ವರ್ಷ ನಡೆದ 61 ಭಯೋತ್ಪಾದಕ ಘಟನೆಗಳಲ್ಲಿ ಒಟ್ಟು 127 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 12 ನಾಗರಿಕರು, 19 ಭದ್ರತಾ ಪಡೆ ಸಿಬ್ಬಂದಿ ಮತ್ತು 96 ಮಂದಿ ಉಗ್ರರು ಹತರಾಗಿದ್ದಾರೆ. ಈ ವರ್ಷ ಜುಲೈನಲ್ಲಿ ಹೆಚ್ಚಿನ ಹತ್ಯೆಗಳು ನಡೆದಿವೆ. ಜುಲೈ 22 ರವರೆಗೆ 24 ಉಗ್ರರು ಹತರಾದರೆ, ಮೂವರು ಭದ್ರತಾ ಪಡೆ ಸಿಬ್ಬಂದಿ ವೀರಮರಣವನ್ನಪ್ಪಿದ್ದಾರೆ. ಜೂನ್‌ನಲ್ಲಿ 6 ನಾಗರಿಕರು, 5 ಭದ್ರತಾ ಪಡೆ ಸಿಬ್ಬಂದಿ ಮತ್ತು 13 ಉಗ್ರರನ್ನು ಹತ್ಯೆ ಮಾಡಲಾಗಿದೆ.

 

Indresh KC

Recent Posts

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

2 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

14 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

39 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

39 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

51 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

54 mins ago